ಮಲಗಿ ಎದ್ದನು ರಂಗ, ಮಕ್ಕಳ ಮಾಣಿಕ ಕೃಷ್ಣ |ಛಲ ಹಿಡಿದನು ನೋಡೆ ಮೊಲೆಕೊಡೆ ಕೃಷ್ಣಗೆ ಪಜಲದೊಳು ತಮನ ಮರ್ದಿಸಿ ಅಂದು ಮತ್ಸ್ಯನಾಗಿ |ಬಲುಗಿರಿಯ ನೆಗಹಿ ಮರೆಮಾಡಿ ಕೂರ್ಮನಾಗಿ ||ನೆಲನ ಒಯ್ದವನ ಕೊಲುವೆನೆಂದು ವರಹನಾಗಿ |ಬಲುಭಕ್ತಿಗಾಗಿ ಕಂಬದಿ ನಾರಸಿಂಹನಾಗಿ 1ಚಿಕ್ಕ ರೂಪದಿಂದ ಬಲಿಯ ದಾನವ ಬೇಡಿ |ಉಕ್ಕಿನ ಕೊಡಲಿಯ ಪಿಡಿದ ಪರಶುರಾಮ ||ಮಿಕ್ಕಿದ ತಲೆಯ ಚೆಂಡಾಡಿದ ಶ್ರೀರಾಮ |ಸೊಕ್ಕಿದ ಕಂಸನ ಕೊಲುವೆನೆಂದ ಕೃಷ್ಣ 2ಬಲು ಪತಿವ್ರತೆಯರ ವ್ರತವನಳಿದಬುದ್ಧ|ಕಲಿಯಾಗಿ ಖಡಗುವ ಪಿಡಿದು ಕುದುರೆ ಏರಿ ||ಒಲಿದು ಭಕ್ತರನೆಲ್ಲ ಸಲಹುವೆನೆಂತೆಂದು |ಚೆಲುವ ಪುರಂದರವಿಠಲ ತೊಟ್ಟಿಲೊಳು 3